ದ್ವಾರಕಾ ಪ್ರತಿಷ್ಠಾನದಿಂದ “ನೆಲಪ್ಪಾಲ್ ಉದ್ಯಾನವನ” ದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮ ಉದ್ಘಾಟನೆ -ಕಹಳೆ ನ್ಯೂಸ್
![](https://www.kahalenews.com/wp-content/uploads/2025/02/WhatsApp-Image-2025-02-11-at-10.10.31-AM-750x450.jpeg)
ಪುತ್ತೂರು:ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನೆಲಪ್ಪಾಲ್ ಉದ್ಯಾನವನ ದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಯುತ ಜೀವಂದರ್ ಜೈನ್ ಸದಸ್ಯರು, ನಗರಸಭೆ ಪುತ್ತೂರು ಇವರು ಉದ್ಘಾಟಿಸಿ ಮಾತಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್, ಪುತ್ತೂರು ನಗರಸಭೆ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಅಣ್ಣು ನಾಯ್ಕ, ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಸುಂದರ ಪೂಜಾರಿ ಬಡಾವು, ಪುತ್ತೂರು ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ಗಿರೀಶ್ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು. ಗಣ್ಯರನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗಣ್ಯರು ಮಾತಾಡುತ್ತಾ ಪುತ್ತೂರು ನಗರದಲ್ಲಿರುವ ಎಲ್ಲಾ ಉದ್ಯಾನವನಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆದು ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಲಿ ಎಂದು ಆಶಿಸುತ್ತಾ ದ್ವಾರಕಾ ಪ್ರತಿಷ್ಠಾನದ ಈ ಕೆಲಸವನ್ನು ಪ್ರಶಂಶಿಸಿದರು.
ಸಭಾ ಕಾರ್ಯಕ್ರಮದ ನಂತರ ಅಂತರಾಷ್ಟ್ರೀಯ ಮಟ್ಟದ ನೃತ್ಯ ಕಲಾವಿದೆ ವಿದುಷಿ ದಿವ್ಯ ಪ್ರಭಾತ್ ಬೆಂಗಳೂರು ಇವರಿಂದ ನೃತ್ಯೋಲ್ಲಾಸ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತ ಭಾಷಣವನ್ನು ಸಂಸ್ಥೆಯ ಸಿಬ್ಬಂದಿಯಾದ ಶ್ರೀಯುತ ದುರ್ಗಾ ಗಣೇಶ್ ಇವರು ನಡೆಸಿಕೊಟ್ಟರು, ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಭಟ್ ಇವರು ಧನ್ಯವಾದ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಬಂಧುಗಳು, ಕಲಾಭಿಮಾನಿಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.