Tuesday, February 11, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಮತ್ತು ಪೋಷಕರ ನಡುವಿನ ಬಾಂಧವ್ಯವು ಪ್ರಮುಖ ಪಾತ್ರ ವಹಿಸುತ್ತದೆ- ಸಂಗೀತ ಶರ್ಮ ಪಿ ಜಿ -ಕಹಳೆ ನ್ಯೂಸ್

ಬಂಟ್ವಾಳ : ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಮತ್ತು ಪೋಷಕರ ನಡುವಿನ ಬಾಂಧವ್ಯವು ಪ್ರಮುಖ ಪಾತ್ರ ವಹಿಸುತ್ತದೆ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಶಾಲೆಯ ಶೈಕ್ಷಣಿಕ ಮತ್ತು ಭೌತಿಕ ಅಭಿವೃದ್ಧಿಗಳಿಗೆ ನಿರಂತರವಾಗಿ ಶ್ರಮಿಸಿದಾಗ ಸರ್ವರೀತಿಯ ಬೆಳವಣಿಗೆ ಸಾಧ್ಯವಾಗುತ್ತದೆ. ಸಂಸ್ಕಾರಯುತ ಶಿಕ್ಷಣದಿಂದ ವಿದ್ಯಾರ್ಥಿಗಳ ಭಾವನಾತ್ಮಕ ಸದೃಢ ಬೆಳವಣಿಗೆಗೆ ಅವಕಾಶ ದೊರಕುತ್ತದೆ. ಶಾಲೆಗಳು ಗ್ರಾಮದ ಸರ್ವಧರ್ಮಿಯ ಕೇಂದ್ರವಾಗಿದ್ದು ಅದರ ಬೆಳವಣಿಗೆ ಊರಿನ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ.ಎಂದು ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸಂಗೀತ ಶರ್ಮಾ ಪಿ ಜಿ ಹೇಳಿದರು.

ಅವರು ಮಂಗಳವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ನೂತನ ಶಾಲಾಭಿವೃದ್ಧಿ ಸಮಿತಿಯ ಆಯ್ಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಮಾತನಾಡಿ ಭಾರತ ದೇಶದ ಅಭಿವೃದ್ಧಿಯು ಶಾಲೆಯ ತರಗತಿ ಕೋಣೆಗಳಲ್ಲಿದೆ. ಶಾಲೆಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿಯಾಗುತ್ತದೆ, “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ದಾಸವಾಣಿಯಂತೆ ಗುರು ಮುಖೇನ ಪಡೆದ ವಿದ್ಯೆಯು ಎಂದಿಗೂ ಶಾಶ್ವತ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲಾ ಪರವಾಗಿ ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸಂಗೀತ ಶರ್ಮರನ್ನು ಗೌರವಿಸಿ ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರಂಜಿತ್ ಕೆದ್ದೇಲ್, ಶಾಲಾ ಅಭಿವೃದ್ಧಿ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರಾ ರವಿ ಅಂಚನ್, ಉಪಾಧ್ಯಕ್ಷೆ ಉಷಾಲಾಕ್ಷಿ ಉಪಸ್ಥಿತರಿದ್ದರು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು.