Recent Posts

Sunday, January 19, 2025
ಸುದ್ದಿ

ಮಂಗಳೂರಿಗೆ ಆಗಮಿಸಿದ ಬಿಜೆಪಿ ಚಾಣಕ್ಯ ಅಮಿತ್ ಶಾ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಆಗಮಿಸಿದ್ದಾರೆ. ದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಏರ್ ಪೋರ್ಟ್‍ಗೆ ಬಂದಿಳಿದರು. ಸ್ವಲ್ಪ ತಡವಾಗಿ ಆಗಮಿಸಿದ ಅಮಿತ್ ಶಾರನ್ನು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಹೂಗುಚ್ಛ, ಶಾಲು ಹೊದಿಸಿ ಸ್ವಾಗತಿಸಿದರು. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಮಣ್ಣಗುಡ್ಡೆಯ ಸಂಘನಿಕೇತನಕ್ಕೆ ವಿಶೇಷ ಕಾರಿನಲ್ಲಿ ಬಿಗಿ ಭದ್ರತೆಯೊಂದಿಗೆ ತೆರಳಿದರು. ಮಂಗಳೂರಿನ ಆರ್‍ಎಸ್‍ಎಸ್ ಕಚೇರಿ ಸಂಘನಿಕೇತನದಲ್ಲಿ ನಡೆಯುತ್ತಿರೋ ಬೈಠಕ್‍ನಲ್ಲಿ ಅಮಿತ್ ಶಾ ಭಾಗವಹಿಸಿದ್ದಾರೆ.ಈ ಸಭೆಯಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ, ಶಬರಿಮಲೆ ಹಾಗೂ 2019ರ ಲೋಕಸಭೆ ಚುನಾವಣೆ ವಿಚಾರ ಹಾಗೂ ಬೈ ಎಲೆಕ್ಷನ್‍ನಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿರುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಇಂದು ರಾತ್ರಿ ಮಂಗಳೂರಲ್ಲಿ ತಂಗಲಿರುವ ಅಮಿತ್ ಶಾ ನಾಳೆ ಬೆಳಿಗ್ಗೆ ದಿಲ್ಲಿಗೆ ಪಯಣ ಬೆಳೆಸಲಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು