Tuesday, April 8, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ವಾರ್ಡಿನ ನಂತೂರು ಬಬ್ಬುಸ್ವಾಮಿ ದೈವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ವಾರ್ಡಿನ ನಂತೂರು ಬಬ್ಬುಸ್ವಾಮಿ ದೈವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು.

ನಂತರ ಮಾತನಾಡಿದ ಶಾಸಕರು, ಇಲ್ಲಿ ಅಗತ್ಯವಾಗಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ವಾರ್ಡಿನ ಪಾಲಿಕೆ ಸದಸ್ಯ ಮನೋಹರ್ ಕದ್ರಿ ಯವರು ನನ್ನ ಗಮನಕ್ಕೆ ತಂದಿದ್ದು, ಶಾಸಕರ ಅನುದಾನವನ್ನು ಬಳಸಿಕೊಂಡು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಅಲ್ಲದೇ ಶೀಘ್ರವಾಗಿ ಪೂರ್ಣಗೊಳಿಸಲು ಸಹ ಕ್ರಮ ವಹಿಸಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪ್ರಮುಖರಾದ ರವೀಂದ್ರ ನಂತೂರು, ಶಿವಪ್ಪ ನಂತೂರು, ಭಾಸ್ಕರ ಚಂದ್ರ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ವರುಣ್ ಅಂಬಟ್, ಚೇತನ್, ಶಶಾಂಕ್, ಸಂತೋಷ್, ತಾರನಾಥ ಶೆಟ್ಟಿ, ರವೀಶ್ ರೈ, ಸುನಿಲ್, ದಿನೇಶ್, ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ