
ದಾವಣಗೆರೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ ಪ್ರಕರಣ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು.
ಗುರುವಾರ (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಹೊರಟ್ಟಿ ಅವರಿಗೆ ದೂರು ನೀಡಿದ್ದರಿಂದ ಅವರೇ ನಡೆಸಲಿದ್ದಾರೆ ಎಂದು ತಿಳಿಸಿದರು.
ಮೈಸೂರಿನ ಉದಯಗಿರಿಯಲ್ಲಿ ನಡೆದ ಪ್ರಕರಣದ ಸರ್ಕಾರ ಹಾಗೂ ಗೃಹ ಸಚಿವರು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ದುರ್ಘಟನೆ ಎಲ್ಲಿಯೂ ನಡೆಯಬಾರದು. ಯಾರೇ ಆಗಿರಲಿ ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಪೋಸ್ಟ್ ಹಾಕಬಾರದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಜೆಟ್ ಅಧಿವೇಶನ ಮಾ. 3 ರಿಂದ ಪ್ರಾರಂಭ ಅಗಲಿದೆ. ಮೊದಲ ದಿನ ರಾಜ್ಯಪಾಲರಿಂದ ಜಂಟಿ ಸದನ ಉದ್ದೇಶಿಸಿ ಮಾತನಾಡುವರು ಎಂದು ತಿಳಿಸಿದರು.
ಮಾ. 7 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಜೆಟ್ ಮಂಡನೆ ಆಗಲಿದೆ ಎಂದು ತಿಳಿಸಿದರು.