ಮಾ.1ರಂದು ಬಲ್ನಾಡಿನ ಶ್ರೀ ದಂಡ ನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದೈವಗಳ 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ; ಕಹಳೆ ನ್ಯೂಸ್

ಬಲ್ನಾಡಿನ ಶ್ರೀ ದಂಡ ನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದೈವಗಳ 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಇದೇ ಬರುವ ಮಾ.1ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.
ಮಧ್ಯಾಹ್ನ 12ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 7 ಗಂಟೆಗೆ ಶ್ರೀ ದೈವಗಳ ಭಂಡಾರ ತೆಗೆದು ಮಾಡ ಸ್ಥಾನದಲ್ಲಿ ತಂಬಿಲ ಸೇವೆ ನಡೆಯಲಿದೆ.