Wednesday, April 2, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲಕ್ಷಾಂತರ ರೂ. ಖೋಟಾ ನೋಟು ಚಲಾವಣೆ; ಪರಾರಿಯಾಗಿದ್ದ ಆರೋಪಿಯ ಬಂಧನ-ಕಹಳೆ ನ್ಯೂಸ್

ಬಂಟ್ವಾಳ: ಲಕ್ಷಾಂತರ ರೂ. ಖೋಟಾ ನೋಟು ಚಲಾವಣೆಗೆ ಬಂದು ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2024 ರಲ್ಲಿ ಬಿಸಿರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ಬಂದು ಪೊಲೀಸರಿಗೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದರೆ ಓರ್ವ ಆರೋಪಿ ಪರಾರಿಯಾಗಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳ ನಿವಾಸಿಗಳಾದ ಮಹಮ್ಮದ್ ಸಿ.ಎ. ಮತ್ತು ಖಮರುನ್ನೀಶ ಪೊಲೀಸರ ಕೈಗೆ ಸಿಕ್ಕಿಕೊಂಡಿದ್ದರು. ಆದರೆ ಇನ್ನೋರ್ವ ಪ್ರಮುಖ ಆರೋಪಿಯಾಗಿದ್ದ ಕೇರಳ ಚೆಂಗಳ ನಿವಾಸಿ ಶರೀಫ್ ಪಿ.ಎ.ಅವರನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಕಾರಿನಲ್ಲಿ ಬಂದು ಅಂಗಡಿಗಳಲ್ಲಿ 500 ಮುಖ ಬೆಲೆಯ ಖೋಟಾ ನೋಟುಗಳನ್ನು ಬಹಳ ನಾಜೂಕಾಗಿ ಚಲಾವಣೆ ಮಾಡುತ್ತಿದ್ದರು.

10 ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಅಂದರೆ 100 ರೂಪಾಯಿಗಿಂತ ಕಡಿಮೆ ಬೆಲೆಯ ಸಾಮಾಗ್ರಿಗಳನ್ನು ಪಡೆದು ಚಿಲ್ಲರೆ ಹಣವನ್ನು ಪಡೆದು ನಕಲಿ ಹಣವನ್ನು ಅಸಲಿಯಾಗಿ ಪರಿವರ್ತನೆ ಮಾಡಿ ಹೊರಟು ಹೋಗುತ್ತಿದ್ದರು.

ಆದರೆ ಇವರ ಅಸಲಿ ಕಥೆಯ ಬಗ್ಗೆ ಅಂಗಡಿಯ ಮಾಲಕರುಗಳಿಗೆ ಸಂಶಯ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಪೊಲೀಸರ ದಾಳಿಯ ವೇಳೆ ಪ್ರಕರಣದ ಮೂಲ ರೂವಾರಿ ಶರೀಫ್ ತಲೆಮರೆಸಿಕೊಂಡಿದ್ದ.

ಇದೀಗ ಕೇರಳ ವಿದ್ಯಾನಗರದಲ್ಲಿ ಈತನನ್ನು ಖಚಿತವಾದ ಮಾಹಿತಿ ಮೇಲೆ ಬಂಧನ ಮಾಡಲಾಗಿದೆ.

ಮೂವರ ಮೇಲೆ ಕೂಡ ಖೋಟಾ ನೋಟು ಚಲಾವಣೆ ಮಾಡುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿತ್ತು. ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಬಂಧನವಾಗದೆ ತಲೆಮರೆಸಿಕೊಂಡಿದ್ದು ಈತ ವಾರೆಂಟ್ ಆರೋಪಿಯಾಗಿದ್ದ.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಂತೆ ಬಂಟ್ವಾಳ ನಗರ ಠಾಣಾ ಪೊಲೀಸರಾದ ಸುಜು, ಜಗದೀಶ್, ಕೃಷ್ಣಕುಲಾಲ್, ಇರ್ಷಾದ್ ಅವರು ಕೇರಳದಿಂದ ಬಂಧಿಸಿ ಕರೆತಂದಿದ್ದಾರೆ.