
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಡ್ಕದ ಕಿಂಡೋವು ದರ್ಖಾಸ್ ಮನೆ ನಿವಾಸಿ ಜಿನ್ನಪ್ಪ ಗೌಡರ ಪುತ್ರ ಶ್ರೀನಿವಾಸ (28) ಎಂಬುವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.
ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗುತ್ತಿದ್ದ ಶ್ರೀನಿವಾಸ, ಕೆಲ ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದು, ಫೆ.
24ರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಿಗ್ಗೆ ತೋಟದ ಕೆರೆಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.