ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ -ಕಹಳೆ ನ್ಯೂಸ್

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಕುಟುಂಬ ಸಹಿತ ಗುರುವಾರ ಸಂಜೆ ಭೇಟಿ ನೀಡಿದರು.
ಅವರ ಕುಟುಂಬದ ಮನೆ ನಿಡ್ಡೋಡಿಯಲ್ಲಿ ಇರುವುದರಿಂದ ವಿಶೇಷ ಸಂದರ್ಭದಲ್ಲಿ ಮನೆಗೆ ಬರುತ್ತಿದ್ದು, ಆಗ ಕಟೀಲು ದೇಗುಲಕ್ಕೂ ಭೇಟಿ ನೀಡುತ್ತಿರುತ್ತಾರೆ.
ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ , ಕಮಲಾದೇವಿ ಪ್ರಸಾದ ಆಸ್ರಣ್ಣ , ಹರಿನಾರಾಯಣದಾಸ ಆಸ್ರಣ್ಣ, ಸದಾನಂದ ಆಸ್ರಣ್ಣ ಮತ್ತಿತತರು ಉಪಸ್ಥಿತರಿದ್ದರು.