Saturday, April 5, 2025
ಜಿಲ್ಲೆರಾಜ್ಯಸುದ್ದಿ

ಮಹಾಕುಂಭ ಮೇಳ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಭೀಕರ ರಸ್ತೆ ಅಪಘಾತ; 03 ಮಂದಿ ಸಾವು, ಆರು ಜನ ಗಂಭೀರ-ಕಹಳೆ ನ್ಯೂಸ್

ಜೈಪುರ: ಲಾರಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 03 ಮಂದಿ ಮೃತಪಟ್ಟು, 06 ಮಂದಿ ಗಂಭೀರವಾಗು ಗಾಯಗೊಂಡಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯ ಶಹಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಹಾಕುಂಭಮೇಳದಿಂದ ವಾಪಸ್ ಆಗುತ್ತಿದ್ದಾಗ ಕ್ರೂಸರ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಭರತ್ (45), ಜಗದೀಶ್​ (40) ಹಾಗೂ ಅಮೃತ್ ಬಾಯಿ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದ ಕುರಿತು ಮಾಹಿತಿ ನೀಡಿರುವ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು, ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಆಗುತ್ತಿದ್ದಾಗ ಜಿಲ್ಲೆಯ ಶಹಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟಾಗೆ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ