ಸುಭಾಷ್ ಚಂದ್ರ ಬೋಸ್ ತ್ರಿವರ್ಣ ಧ್ವಜ ಹಾರಿಸಿದ ಸ್ಮರಣಾರ್ಥ: 75 ರೂ ಮುಖಬೆಲೆಯ ನಾಣ್ಯ ಹೊರತರಲು ಕೇಂದ್ರ ಸರ್ಕಾರ ನಿರ್ಧಾರ – ಕಹಳೆ ನ್ಯೂಸ್

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ನ ಪೋರ್ಟ್ ಬ್ಲೈರ್ ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸರು 1943 ರ ಡಿಸೆಂಬರ್ 30 ರಂದು ಮೊದಲ ಬಾರಿಗೆ ತ್ರಿವರ್ಣ ಧ್ವಜಾರೋಹಣ ಮಾಡಿದ್ದರು. ಈ ಘಟನೆಗೆ 75 ವರ್ಷಗಳು ಸಂದಿದ್ದು ಈ ಹಿನ್ನೆಲೆಯಲ್ಲಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಹೊರತರಲಾಗುತ್ತಿದೆ.
ಭಾರತದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿ 75 ವರ್ಷವಾದ ಹಿನ್ನೆಲೆಯಲ್ಲಿ ಇದರ ಸ್ಮರಣಾರ್ಥವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಹೊರತರುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ಸೆಲ್ಯುಲರ್ ಜೈಲ್ ನ ಮುಂಭಾಗದಲ್ಲಿ ನೇತಾಜಿ ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್ ಮಾಡುತ್ತಿರುವ ಚಿತ್ರ ನಾಣ್ಯದ ಮೇಲೆ ಇರಲಿದೆ. ಅ.21 ರಂದು ರ್ಪಧಾನಿ ನರೇಂದ್ರ ಮೋದಿ ಆಜಾದ್ ಹಿಂದ್ ಸರ್ಕಾರ ರಚನೆಯಾದ 75 ನೇ ವರ್ಷಾಚರಣೆ ಅಂಗವಾಗಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದರು.