ವಿರಾಜಪೇಟೆ: ಜಿಲ್ಲಾಧಿಕಾರಿ ಪಿ.ಐ ಶ್ರೀ ವಿದ್ಯಾ ಅವರು ವಿರಾಜಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿ ವ್ಯಾಪ್ತಿಯ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಅಹವಾಲುಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.