Thursday, April 17, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬ್ಲೂ ಹೆರಿ ಹಿಲ್ಸ್ ಬಳಿ ಕಿಯೋನಿಕ್ಸ್ ಸಾಫ್ಟ್ವೇರ್ ಪಾರ್ಕ್ ನಿರ್ಮಾಣದ ಕುರಿತು ಸ್ಥಳ ಪರಿಶೀಲನೆ-ಕಹಳೆ ನ್ಯೂಸ್

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ನೀಡಿದ ಮನವಿಯ ಮೇರೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬ್ಲೂ ಹೆರಿ ಹಿಲ್ಸ್ ಬಳಿ ಕಿಯೋನಿಕ್ಸ್ ಸಾಫ್ಟ್ವೇರ್ ಪಾರ್ಕ್ ನಿರ್ಮಾಣದ ಕುರಿತು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಿಯೋನಿಸ್ಕ್ ಅಧ್ಯಕ್ಷರಾದ ಶರತ್ ಬಚ್ಚೆಗೌಡ ಹಾಗೂ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ಥಳ ಪರಿಶೀಲನೆ ನಡೆಯಿತು, ಇದೇ ವೇಳೆ ರಸ್ತೆ ಅಗಲೀಕರಣದ ಬಗ್ಗೆಯೂ ಚರ್ಚೆ ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆ ಬಳಿಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನೂತನ ಐಟಿ-ಬಿಟಿ ಪಾರ್ಕ್ ನಿರ್ಮಾಣಕ್ಕೆ ಸಂಬಂಧಪಟ್ಟ ಮಹತ್ವದ ಸಭೆಯಲ್ಲಿ ಕಿಯೋನಿಸ್ಕ್ ಅಧ್ಯಕ್ಷರಾದ ಶರತ್ ಬಚ್ಚೆಗೌಡ, ಶಾಸಕರಾದ ಡಾ. ವೈ ಭರತ್ ಶೆಟ್ಟಿ, ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶ್ರೀ ಮಂಜುನಾಥ್ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ಮುಲ್ಲೈ ಮುಗಿಲನ್, ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರು, ಕಿಯೋನಿಸ್ಕ್ ನ ವ್ಯವಸ್ಥಾಪಕ ನಿರ್ದೇಶಕರು, ಕ್ರೆಡಿ ಅಸೋಸಿಯೇಷನ್ ಸದಸ್ಯರು ಹಾಗೂ ಸಂಬಂಧಪಟ್ಟ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಲ್ಲಿ ಸಾಫ್ಟ್‍ವೇರ್ ಪಾರ್ಕ್ ನಿರ್ಮಾಣಕ್ಕೆ ಕಳೆದ ಹಲವು ವರ್ಷಗಳಿಂದ ಸತತ ಪ್ರಯತ್ನ ನಡೆಸಲಾಗಿದೆ. ಇದೀಗ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಈ ಕುರಿತು ನೀಡಿದ ಮನವಿಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ. ಇದರಿಂದ ಸ್ಥಳೀಯ ಐಟಿ,ಬಿಟಿ ಪದವೀಧರರಿಗೆ ಸ್ಥಳೀಯವಾಗಿ ಉದ್ಯೋಗ ದೊರಕಲು ಅವಕಾಶವಾಗುತ್ತದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ