Friday, April 11, 2025
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಲಾಂಗ್‌ ಹಿಡಿದು ಓಡಾಡುತ್ತಿದ್ದ ಕುಖ್ಯಾತ ಕಳ್ಳ ಸೇರಿ ಇಬ್ಬರ ಸೆರೆ -ಕಹಳೆ ನ್ಯೂಸ್

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಹೋಗುವಾಗ ಕೈಯಲ್ಲಿ ಲಾಂಗ್‌ ಹಿಡಿದು ಭಯ ಸೃಷ್ಟಿಸಿದ್ದ ಕುಖ್ಯಾತ ಕಳ್ಳ ಸೇರಿ ಇಬ್ಬರನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಸಂತನಗರದ ಜಲ್ಲಾ ಸಿದ್ದಿಕ್ಕಿ (36) ಮತ್ತು ಸಂತೋಷ್‌(26) ಬಂಧಿತರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳು ಮಾ.3ರ ರಾತ್ರಿ ಶಿವಾಜಿನಗದ ಬಂಬೂ ಬಜಾರ್‌ ರಸ್ತೆಯಲ್ಲಿ ಕೈಯಲ್ಲಿ ಲಾಂಗ್‌ ಹಿಡಿದು ದ್ವಿಚಕ್ರ ವಾಹನದಲ್ಲಿ ಆರೋಪಿಗಳು ಸುತ್ತಾಡುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ದೃಶ್ಯವನ್ನು ಮಹಿಳೆಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ವಿಡಿಯೋ ಆಧರಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿ ಸಿದ್ದಿಕ್ಕಿ ಮಾ.3ರ ರಾತ್ರಿ ಸ್ನೇಹಿತ ಸಂತೋಷ್‌ ಜತೆ ದ್ವಿಚಕ್ರ ವಾಹನದಲ್ಲಿ ಬರುವಾಗ ಕೈಯಲ್ಲಿ ಲಾಂಗ್‌ ಹಿಡಿದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದ್ದ. ಹೀಗಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಸುತ್ತಾಡುತ್ತಿದ್ದ ದ್ವಿಚಕ್ರ ವಾಹನ ಸಹ ಹಲಸೂರು ಭಾಗದಲ್ಲಿ ಕಳವು ಮಾಡಿರುವುದು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಸದ್ಯ ಇಬ್ಬರು ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಸಲಾಗಿದೆ.

ಆರೋಪಿ ಪೈಕಿ ಜಲ್ಲಾ ಸಿದ್ದಿಕ್ಕಿ ವೃತ್ತಿಪರ ಕಳ್ಳನಾಗಿದ್ದಾನೆ. ಈತನ ವಿರುದ್ಧ ಈ ಹಿಂದೆ ದರೋಡೆ, ಸುಲಿಗೆ, ಮನೆ ಕಳವು ಸೇರಿ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸುಮಾರು 30 ಪ್ರಕರಣಗಳು ದಾಖಲಾಗಿವೆ. ಹಲವು ಜೈಲಿಗೂ ಹೋಗಿ, ಜಾಮೀನು ಪಡೆದು ಹೊರ ಬಂದಿದ್ದಾನೆ. ಕೆಲ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ಒಡಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ