Monday, March 31, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಮಾಮೇಶ್ವರ ಜ್ಞಾನವಿಕಾಸದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂಟ್ವಾಳ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಕಲ್ಲಡ್ಕ ವಲಯದ ಮಮೇಶ್ವರ ಕಾರ್ಯಕ್ಷೇತ್ರದ ನಂದ ದೀಪಾ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕೇಂದ್ರದ ಸದಸ್ಯರಾದ ಲಕ್ಷ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಸದಸ್ಯರು ಅನಿಸಿಕೆ ಹೇಳಿದರು.

ತಾಲೂಕಿನ ಮಾನ್ಯ ಯೋಜನಾಧಿಕಾರಿಯವರಾದ ರಮೇಶ್ ಸರ್ ಜ್ಞಾನವಿಕಾಸ ಕಾರ್ಯಕ್ರಮ ಗಳ ಬಗ್ಗೆ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ನಡೆಸಿ ಬಹುಮಾನ ವಿತರಣೆ ಮಾಡಲಾಯಿತು. ಈ ಸಂಧರ್ಭ ಒಕ್ಕೂಟದ ಅಧ್ಯಕ್ಷರಾದ ಹರೀಶ್, ಉಪಾಧ್ಯಕ್ಷರಾದ ರಾಮದಾಸ್,ತಾಲ್ಲೂಕು ಜ್ಞಾನವಿಕಾಸ ಸಮನ್ವಯಧಿಕಾರಿ ದೀಪಾ , ಸೇವಾಪ್ರತಿನಿಧಿ ಯಶೋದಾ ಉಪಸ್ಥಿತರಿದ್ದರು. ಕೇಂದ್ರದ ಸದಸ್ಯರು ಸಾಂಸ್ಕೃತಿ ಕಾರ್ಯಕ್ರಮ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ