Wednesday, April 23, 2025
ಜಿಲ್ಲೆರಾಜ್ಯಸುದ್ದಿ

ಕೋಲಾರ ಎಪಿಎಂಸಿ, ಜೈಲಿಗೆ ಉಪಲೋಕಾಯುಕ್ತ ದಿಢೀರ್‌ ಭೇಟಿ: ಅವ್ಯವಸ್ಥೆ ಕಂಡು ಪ್ರಕರಣ-ಕಹಳೆ ನ್ಯೂಸ್

ಕೋಲಾರ: ಉಪಲೋಕಾಯುಕ್ತ ಬಿ.ವೀರಪ್ಪ ಅವರು ನಗರದ ಎಪಿಎಂಸಿ ಮಾರುಕಟ್ಟೆ ಹಾಗೂ ಜೈಲಿಗೆ ಸೋಮವಾರ ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು.

ಎಪಿಎಂಸಿಯಲ್ಲಿ ರೈತರಿಗೆ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ, ತ್ಯಾಜ್ಯ ತುಂಬಿಕೊಂಡಿದೆ, ಕಮಿಷನ್ ಹೆಚ್ಚಿಗೆ ವಸೂಲಿ ಮಾಡುತ್ತಿದ್ದಾರೆ, ಒಳಗೆ ಏನು ನಡೆಯುತ್ತಿದೆ ಎಂಬುದು ಅಲ್ಲಿನ ಅಧಿಕಾರಿಗಳಿಗೇ ಗೊತ್ತಿಲ್ಲ‌.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಏನು ಕೆಲಸ ಮಾಡುತ್ತಿದ್ದರೋ ಏನೋ? ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇನೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಸತಿ ಪ್ರದೇಶದ ‌ನಡುವೆ ಜೈಲು ಇದೆ‌. ಪಕ್ಕದ ಮನೆಯಿಂದ ಏನಾದರೂ ಎಸೆಯಬಹುದು. ಮೊದಲು ನಗರದ ಹೊರಕ್ಕೆ ಸ್ಥಳಾಂತರಿಸಿ ಎಂದು ಸೂಚನೆ ನೀಡಿದರು.

ನಗರದ ಅನೈರ್ಮಲ್ಯ ಕುರಿತು ಪ್ರಶ್ನಿಸಿದಾಗ ಸಿಬ್ಬಂದಿ ಇಲ್ಲ ಎಂಬ ಉತ್ತರ ಬಂತು.

ಆಗ ವೀರಪ್ಪ, ‘ಸಿಬ್ಬಂದಿ‌ ಕೊರತೆ ಎಂದು ಊಟ ಮಾಡದೆ ಇರುತ್ತೀರಾ? ಏಕೆ ಸ್ವಚ್ಛತೆ ಮಾಡುತ್ತಿಲ್ಲ? ಲೋಕಾಯುಕ್ತದಲ್ಲಿ ಸಿಬ್ಬಂದಿ ಇಲ್ಲ ಎಂದು ನಾವು ಕೆಲಸ ಮಾಡದೆ ಸುಮ್ಮನಿದ್ದೆವೆಯೇ?’ ಎಂದು ಕೋಲಾರ ನಗರಸಭೆ ಪೌರಾಯುಕ್ತರಿಗೆ ತರಾಟೆಗೆ ತೆಗೆದುಕೊಂಡರು .

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ