Wednesday, April 23, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಅಕ್ರಮ ಗೋ ಮಾಂಸ ಸಾಗಾಟ ತಡೆದ ಭಜರಂಗದಳ ಕಾರ್ಯಕರ್ತರು-ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ  ನಡೆದಿದೆ.

ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ಭಜರಂಗದಳ ಕಾರ್ಯಕರ್ತರಿಗೆ ಸಿಕ್ಕಿದ್ದು ಅದರಂತೆ ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ ಕೂಡಲೇ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಇದಾದ ಬಳಿಕ ಸ್ಥಳಕ್ಕೆ ಬಂದ ಕದ್ರಿ ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆ.ಜಿ‌ಗೂ ಅಧಿಕ ಗೋ ಮಾಂಸ ಇರುವುದು ಕಂಡುಬಂದಿದ್ದು, ಗೋ ಮಾಂಸ ಹಾಗೂ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ