ಮಂಗಳೂರು: ದ.ಕ.ಜಿಲ್ಲೆಯಲ್ಲಿ ತಲೆದೋರಿರುವ ಮರಳು ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವಂತೆ ಹಾಗೂ ಮರಳು ನೀತಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನ. 19ರಂದು ಬೆಳಿಗ್ಗೆ 10ಕ್ಕೆ ಬಿ.ಸಿ.ರೋಡ್ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು ಎಂದು ಕಟ್ಟಡ ಕಾರ್ಮಿಕ ಫೆಡರೇಶನ್ ಬಂಟ್ವಾಳ ತಾಲೂಕು ಸಮಿತಿ ಕಾರ್ಯದರ್ಶಿ ರಾಮಣ್ಣ ವಿಟ್ಲ ತಿಳಿಸಿದ್ದಾರೆ.
ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹಲವು ತಿಂಗಳುಗಳಿಂದ ಕರಾವಳಿ ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರ ವಾಗಿ ಉಲ್ಬಣಗೊಂಡಿದೆ. ಜಿಲ್ಲೆಯ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮರಳು ದೊರೆಯುತ್ತಿದ್ದರೂ ಜನಸಾಮಾನ್ಯರ ಕಾಮಗಾರಿಗೆ ಪೂರೈಕೆಯಾಗುತ್ತಿಲ್ಲ.
ಹೊರ ರಾಜ್ಯ ಹಾಗೂ ಜಿಲ್ಲೆಗಳಿಗೆ ಯಾವುದೇ ಅಡೆತಡೆಯಿಲ್ಲದೆ ಮರಳು ಪೂರೈಕೆಯಾಗುತ್ತಿದೆ. ಇದರಿಂದ ಕಟ್ಟಡ ಕಾರ್ಮಿಕರು ಮಾತ್ರವಲ್ಲದೆ, ಸಣ್ಣಗುತ್ತಿಗೆದಾರರು ಕೂಡಾ ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ಹೇಳಿದರು.