Recent Posts

Sunday, March 16, 2025
ಉಡುಪಿಜಿಲ್ಲೆಸುದ್ದಿ

ರೂ 2.33 ಕೋಟಿ ವೆಚ್ಚದಲ್ಲಿ ಪಡುಬಿದ್ರಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಪಡುಬಿದ್ರಿ ಸಮೀಪದ ಹೆಜಮಾಡಿ ಬಳಿ ಕೆ-ಸೇಫ್-2 ಯೋಜನೆಯಡಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ 2.33 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 14-03-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಶಾಸಕರ ಗುರ್ಮೆ ಸುರೇಶ್ ಶೆಟ್ಟಿ ಅವರ ನಿರಂತರ ಪ್ರಯತ್ನದಿಂದ ಪಡುಬಿದ್ರಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಇಂದು ಇದರ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ ಎ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಪಡುಬಿದ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹೇಮಚಂದ್ರ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ಅಗ್ನಿಶಾಮಕ ದಳದ ಅಧಿಕಾರಿಗಳು, ಹೆಜಮಾಡಿ, ಪಡುಬಿದ್ರಿ, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.*

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ