Wednesday, April 23, 2025
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ್ ಕುಕ್ಕೆಗೆ ಭೇಟಿ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಮಾ.15ರ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.

ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ದೇವಸ್ಥಾನದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ