ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ! ಚಿಕಿತ್ಸೆ ಫಲಿಸದೇ ಕ್ಯಾಂಟರ್ ಚಾಲಕ ಸಾವು-ಕಹಳೆ ನ್ಯೂಸ್

ಬೆಂಗಳೂರು: ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಜಗನ್ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಮೂರು ಆಟೋಗಳು, ಎರಡು ಕ್ಯಾಬ್‌ಗಳು, ಒಂದು ಬೈಕ್ ಮತ್ತು ಬಸ್ ಜಖಂಗೊಂಡಿವೆ.ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಮುಂಜಾನೆ 3.50 ರ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ.ಈ ವೇಳೆ ಪಾದಚಾರಿ ಮನೋಜ್ ಮತ್ತು ಆಟೋ ಚಾಲಕ ಚಾಂದ್ ಪಾಷಾ ಅವರಿಗೆ ಗಾಯಗಳಾಗಿವೆ. ಅಲ್ಲದೆ, ಕ್ಯಾಂಟರ್ ಚಾಲಕ ಜಗನ್ ಅವರ ಕಾಲು ಮತ್ತು ತಲೆಗೆ ಗಂಭೀರ ಗಾಯಗಳಾಗಿದ್ದು ಮೃತಪಟ್ಟಿದ್ದಾರೆ.
ಗಾಯಾಳುಗಳನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕ್ಯಾಂಟರ್ ಚಾಲಕ ಜಗನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೇಗ ಮತ್ತು ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.