Recent Posts

Monday, March 17, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಮಂಗಳೂರು : ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯವು ಕದ್ರಿ ಮಲ್ಲಿಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಹಿಂದೂ ಸಮಾಜದ ಅಸ್ಮಿತೆಯ ಭಾಗವಾದ ಗೋವಿನ ರಕ್ಷಣೆ ನಮ್ಮೆಲ್ಲರ ಹೊಣೆ. ಇಂತಹ ರಥಯಾತ್ರೆಗಳು ಸಮಾಜದಲ್ಲಿ ಗೋ ರಕ್ಷಣೆಯ ಮಹತ್ವವನ್ನು ತಿಳಿಸಿ, ಗೋ ಸಂರಕ್ಷಣೆಗೆ ಪ್ರೇರಣೆಯಾಗುತ್ತಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ