ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಸಚಿವರೊಂದಿಗೆ ಚರ್ಚೆ- ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧಾನ ಸಭೆಯ ಕಲಾಪದ ನಡುವೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಜೊತೆಗೂಡಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಉಡುಪಿ ಜಿಲ್ಲೆಯ ಕರಾವಳಿ ಭಾಗದ ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್, ಕಾಪು ಗುರ್ಮೆ ಸುರೇಶ್ ಶೆಟ್ಟಿ,, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟೆಹೂಳೆ ಇವರೊಂದಿಗೆ ಸಚಿವರನ್ನು ಭೇಟಿಯಾಗಿ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸುವುದು ಇದು ಅಭಿವೃದ್ಧಿ ದೃಷ್ಟಿಯಿಂದ ಅವಶ್ಯಕವೆಂದು ಸಂಸದರು ಮತ್ತು ಶಾಸಕರು ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.