Saturday, March 22, 2025
ಜಿಲ್ಲೆಸುದ್ದಿ

ಪೊಲೀಸ್‌ ಠಾಣೆಯಲ್ಲಿ ಜೂಜಾಟದ ವಿಡಿಯೋ ವೈರಲ್: ಐವರು ಅಮಾನತು-ಕಹಳೆ ನ್ಯೂಸ್

ಕಲಬುರಗಿ : ಚಿತ್ತಾಪೂರ ತಾಲ್ಲೂಕಿನ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಿಂದ ಜೂಜಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ.

ಜೂಜಾಟದಲ್ಲಿ ತೊಡಗಿದ್ದ ಎಎಸ್‌ಐ ಮಹಿಮೂದ್ ಮಿಯಾ, ಹೆಡ್ ಕಾನ್‌ಸ್ಟೇಬಲ್ ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್ ಮತ್ತು ಕಾನ್‌ಸ್ಟೇಬಲ್ ನಾಗಭೂಷಣ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಗೆ ಸಂಬಂಧಿಸಿದಂತೆ ವಾಡಿ ಪಿಎಸ್‌ಐ ತಿರುಮಲೇಶ್ ಅವರಿಗೂ ನೋಟಿಸ್ ಜಾರಿ ಮಾಡಿ, ಎಸ್ಪಿ ಅಡ್ಡೂರು ಶ್ರೀನಿವಾಸಲು ಕಾರಣ ಕೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ