ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಮಂಜೂರಾದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ (ರಿ )ಬಿ ಸಿ ಟ್ರಸ್ಟ್.ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ವಲಯದ ಬಂಟ್ವಾಳಮೂಡ ಕಾರ್ಯಕ್ಷೇತ್ರದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ ರೂ 2 ಲಕ್ಷ ಅನುದಾನ ಮೊತ್ತದ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲ್ಲೂಕು ಯೋಜನಾಧಿಕಾರಿ ಜಯಾನಂದ ಪಿ ರವರು ಭಜನಾ ಮಂಡಳಿಯ ಅಧ್ಯಕ್ಷರು ಗಣೇಶ್ ದಾಸ್ ಮತ್ತು ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರ. ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಿ ಮೂಡ ಒಕ್ಕೂಟದ ಅಧ್ಯಕ್ಷರಾದ ಪ್ರತಿಭಾ ಶೆಟ್ಟಿ ಮತ್ತು ಪದಾಧಿಕಾರಿಗಳು,ಊರಿನ ಹಿರಿಯರು ಸೇಸಪ್ಪ ದಾಸಯ್ಯ, ಸೇವಾಪ್ರತಿನಿಧಿ ಆಶಾಲತಾ ಉಪಸ್ಥಿತರಿದ್ದರು.