
ಮುಂಬಯಿ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ(ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.
ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ಐಪಿಎಲ್ ವೇಳೆ ಕ್ರಿಕೆಟಿಗ ರಾಹುಲ್ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೊಸತಾಗಿ ಸೇರಿರುವ ಕೆ.ಎಲ್. ರಾಹುಲ್, ವೈಯಕ್ತಿಕ ಕಾರಣಗಳಿಂದಾಗಿ ಸೋಮವಾರ ನಡೆಯುತ್ತಿರುವ ತಂಡದ ಆರಂಭಿಕ ಐಪಿಎಲ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ವಿಕೆಟ್ ಕೀಪರ್ ಬ್ಯಾಟರ್ , ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತನ್ನ ಹಿಂದಿನ ಫ್ರಾಂಚೈಸ್ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧದ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ಆಡಳಿತ ಮಂಡಳಿಯಿಂದ ವಿಶೇಷ ಅನುಮತಿ ಪಡೆದಿದ್ದರು.