Wednesday, March 26, 2025
ಜಿಲ್ಲೆಬೆಳಗಾವಿಸುದ್ದಿ

ಪ್ರತಿ ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಆದೇಶ: ಲಕ್ಷ್ಮೀ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಳಗಾವಿ: ಮಹಿಳೆಯರ ಸಬಲೀಕರಣ ಉದ್ದೇಶದಿಂದಲೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಬೆಳಗಾವಿಯಲ್ಲಿ ಸೋಮವಾರ (ಮಾ.24) ನಡೆದ 3,000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಮಾತನಾಡಿದ ಅವರು, ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಘೋಷಣೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಾನು ಮಂತ್ರಿಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹೊಸರೂಪ ಕೊಡುತ್ತಿದ್ದೇನೆ. ಅಂಗನವಾಡಿ ಇಲಾಖೆಗೆ ಹೈಟೆಕ್ ಸ್ಪರ್ಷ ಕೊಟ್ಟಿದ್ದು, ಸರಕಾರಿ ಮಾಂಟೆಸರಿ ತರಗತಿಗಳನ್ನು ಆರಂಭಿಸಲಾಗಿದೆ. ಇದೀಗ ಇಲಾಖೆ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಚಿವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ