Saturday, March 29, 2025
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸಾಕ್ಷಿ ನಾಶ ಮಾಡಿದ ಆರೋಪದಡಿ ರಜತ್‌, ವಿನಯ್‌ ಲಾಕ್‌: ರಾತ್ರಿಯೇ ಜೈಲಿಗೆ ಶಿಫ್ಟ್‌-ಕಹಳೆ ನ್ಯೂಸ್

ಬೆಂಗಳೂರು:ಮಾಜಿ ಬಿಗ್‌ ಬಾಸ್‌ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ಗೆ ರೀಲ್ಸ್‌ ಕಂಟಕ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್‌ ಹಿಡಿದು ರೀಲ್ಸ್ ಮಾಡಿದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ ಸದ್ಯ ಜೈಲು ಪಾಲಾಗಿದ್ದಾರೆ.

ಪೊಲೀಸರ ತನಿಖೆ ವೇಳೆ ಲಾಂಗ್ ಬದಲಿಸಿದ ಆರೋಪದ ಅಂದರೆ ಸಾಕ್ಷಿ ನಾಶ ಮಾಡಿದ ಆರೋಪದಡಿ ಇಬ್ಬರನ್ನು ಮತ್ತೆ ಬಂಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರೀಲ್ಸ್ಗಾಗಿ ಮಚ್ಚು ಹಿಡಿದು ವಿಡಿಯೋ ಮಾಡಿ ಸಂಕಷ್ಟಕ್ಕೆ ಸಿಲುಕಿರುವ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ ಸದ್ಯ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಂದು (ಮಾರ್ಚ್‌ 26)ಬುಧವಾರ ಇಬ್ಬರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡುತ್ತಾ ಅಥವಾ ಇನ್ನಷ್ಟು ದಿನಗಳ ಕಾಲ ಪೊಲೀಸರ ಕಸ್ಟಡಿಗೆ ನೀಡುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ