Saturday, March 29, 2025
ಕುಂದಾಪುರಜಿಲ್ಲೆಸುದ್ದಿ

ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಸರಕಾರದ ಡಿ.ಕೆ ಶಿವಕುಮಾರ್ ವಿರುದ್ಧ-: ಶಾಸಕ ಕಿರಣ್ ಕೊಡ್ಗಿ ಆಕ್ರೋಶ -ಕಹಳೆ ನ್ಯೂಸ್

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಹೇಳಿಕೆಯ ವಿರುದ್ಧ ಬ್ರಹತ್ ಪ್ರತಿಭಟನೆಯಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಮಾತಾನಾಡಿದ ಅವರು ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ ಕಾಂಗ್ರೆಸ್ ಸರಕಾರ, ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೆ. ಮುಸ್ಲಿಮರಿಗಾಗಿ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ ಬಗ್ಗೆ ಖಂಡಿಸಿದರು.

ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿಯವರು ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆಯವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಡಿಕೆ ಶಿವಕುಮಾರ್ ಮಾತನ್ನು ಖಂಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ ,,ಸುಧೀರ್ ಕೆ. ಎಸ್. ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ,, ಉಪಾದ್ಯಕ್ಷೆ ವನಿತಾ ಬಿಲ್ಲವ,,ಕುಂದಾಪುರ ಮಂಡಲ ಉಪಾಧ್ಯಕ್ಷರುಗಳು, ಮಂಡಲದ ಪದಾಧಿಕಾರಿಗಳು ವಿವಿಧ ಮೊರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಮತ್ತು ಸದಸ್ಯರು,ಮತ್ತು ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳನ್ನು ಕೂಗಿ ಡಿಕೆ ಶಿವಕುಮಾರ್ ರವರ ಪ್ರತಿಕೃತಿ ದಹಿಸಿಲಾಯಿತು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ