Monday, March 31, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ ಸಹಾಯಧನ ಮಂಜೂರಾತಿ ಪತ್ರ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ:ಮಾ 27 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ). ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಿತ್ತೂರು ಇದರ ಸಭಾಂಗಣ ರಚನೆಗೆ ಒಂದು ಲಕ್ಷದ ಸಹಾಯಧನ ಮಂಜೂರಾತಿ ಪತ್ರವನ್ನು ಶಾಲಾ ಮುಖ್ಯೋಪಾಧ್ಯಯಿಣಿ ಸರೋಜಾ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ಶ್ರೀಯುತ ಶ್ರೀ ರಮೇಶ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಸುಗಂಧಿನಿ,ಶೌರ್ಯ ಸದಸ್ಯರಾದ ಪದ್ಮನಾಭ, ವೆಂಕಟರಮಣ ಪೃಥ್ವಿರಾಜ್ , ಶಾಲಾ SDMC ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, SDMC ಸದಸ್ಯರು ಮತ್ತು ಸಹ ಶಿಕ್ಷಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ