Recent Posts

Sunday, January 19, 2025
ಸುದ್ದಿ

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ: ಸೆರೆಯಾದ ಚಿರತೆ ವನ್ಯಜೀವಿ ವಲಯಕ್ಕೆ ರವಾನೆ – ಕಹಳೆ ನ್ಯೂಸ್

ಉಡುಪಿ: ಕುಂದಾಪುರ ತಾಲೂಕಿನ ಕಾಳಾವರದ ಕಕ್ಕೇರಿ ಎಂಬಲ್ಲಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ ಸಿಕ್ಕಿದೆ. ಸೆರೆಯಾದ ಚಿರತೆಯನ್ನು ವನ್ಯಜೀವಿ ವಲಯಕ್ಕೆ ರವಾನಿಸಲಾಗಿದೆ.

ಕೆಲವು ದಿನಗಳ ಹಿಂದೆ ವಾರಾಹಿ ಕಾಲುವೆ ಬಳಿಯ ಹಾಡಿ ಪ್ರದೇಶದಲ್ಲಿ 2 ಚಿರತೆಗಳು ಪ್ರತ್ಯಕ್ಷವಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಅಲ್ಲಿ ಹೆಣ್ಣು ಚಿರತೆ ಬೋನಿಗೆ ಸೆರೆ ಸಿಕ್ಕಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮತ್ತೆ ಅದೆ ಜಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿನಲ್ಲಿ‌ 10 ವರ್ಷದ ಗಂಡು ಚಿರತೆ‌ ಸೆರೆಯಾಗಿದೆ. ಆರ್ ಎಫ್ ಓ ಪ್ರಭಾಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಬೋನಿಗೆ ನಾಯಿ ಕಟ್ಟಿ ಚಿರತೆ ಸೆರೆಗೆ ಕಾರ್ಯತಂತ್ರ ರೂಪಿಸಲಾಗಿತ್ತು.  ಸೆರೆಯಾದ ಚಿರತೆಯನ್ನು ವನ್ಯಜೀವಿ ವಲಯಕ್ಕೆ ರವಾನಿಸಲಾಗಿದೆ.