Tuesday, April 1, 2025
ಉಡುಪಿಜಿಲ್ಲೆಸುದ್ದಿ

ಉಡುಪಿ ತಾಲೂಕು 15 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಎಂ.ಎಲ್.ಸಾಮಗ ಆಯ್ಕೆ -ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 17 ಮತ್ತು 18ರಂದು ಎರಡು ದಿನಗಳ ಕಾಲ ಅದ್ದೂರಿಯಿಂದ ನಡೆಯಲಿದ್ದು , ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಣ ತಜ್ಞ , ಯಕ್ಷಗಾನ ಕಲಾವಿದ, ವಾಗ್ಮಿ, ಮಾಜಿ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಪ್ರೊ. ಎಂ.ಎಲ್.ಸಾಮಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊಡವೂರು ಶಂಕನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಯಿತು. ಎಂದು ಕಸಾಪ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು ಹಾಗು ರಂಜನಿ ವಸಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ