Recent Posts

Monday, January 20, 2025
ಸುದ್ದಿ

ಪ್ರವಾಸೋದ್ಯಮ ಅಭಿವೃದ್ಧಿ: ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಡಿ.ಕೆ.ಶಿ – ಕಹಳೆ ನ್ಯೂಸ್

ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರದ ಬಳಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ. ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದ ಮೊದಲ ಬಜೆಟ್‌ನಲ್ಲಿ ಕೆಆರ್‌ಎಸ್ ಬಳಿ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸುವುದಾಗಿ ಘೋಷಿಸಲಾಗಿತ್ತು. ನಮ್ಮಲ್ಲಿರುವ ವನ್ಯಜೀವಿ, ಅರಣ್ಯ ಸಂಪತ್ತು ಎಲ್ಲವನ್ನು ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು