Wednesday, April 2, 2025
ಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ‘ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ’-ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ‘ ಚಿಣ್ಣರ ಪ್ರಶಸ್ತಿ ಪ್ರಧಾನ ‘ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರದ್ದೂ ಆಗಿರುತ್ತದೆ ಎಂದು ತಿಳಿಸಿದರು.

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯ ಶೈಕ್ಷಣಿಕ ನಿರ್ದೇಶಕರು ಹಾಗೂ ಶೈಕ್ಷಣಿಕ ಮನಶಾಸ್ತ್ರಜ್ಞರು ಆಗಿರುವ ಬಿ. ಪುಷ್ಪರಾಜ ರವರು ಮಾತನಾಡಿ, ಎಳೆಯ ಮಕ್ಕಳ ಕಲಿಕೆಗೆ ಅನುಕೂಲಕರವಾದ ಚಟುವಟಿಕೆ ಆಧಾರಿತ ಶಿಕ್ಷಣ ನೀಡುವುದರಿಂದ ಮಕ್ಕಳು ಹೆಚ್ಚು ಕ್ರಿಯಾಶೀಲರಾಗಿ ಬೆಳೆಯಲು ಸಾಧ್ಯವಾಗುವುದು.ಅಲ್ಲದೆ ಎಳೆಯ ಮಕ್ಕಳಿಗೆ ಮಾತನಾಡುವ ಕೌಶಲ್ಯವನ್ನು ಬೆಳೆಸುವ ಹಲವು ಚಟುವಟಿಕೆಗಳನ್ನು ನೀಡುವುದರಿಂದ ಅವರ ಜ್ಞಾನವನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗುತ್ತದೆ ಎನ್ನುವುದನ್ನು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ ಜೈನ್ ರವರು ಮಾತನಾಡಿ, ಮಕ್ಕಳಲ್ಲಿ ಶಿಸ್ತು, ಸಂಯಮ, ಗೌರವಭಕ್ತಿಯ ಮನೋಭಾವವನ್ನು ಬೆಳೆಸುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವೂ ಆಗಿದೆ ಎಂದು ಹೇಳುವ ಮೂಲಕ ಎಳೆಯ ವಯಸ್ಸಿನ ಮಕ್ಕಳು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕಾದರೆ ಮಗು ಬೆಳೆದಿರುವ ಸುತ್ತಮುತ್ತಲಿನ ಪರಿಸರ ಉತ್ತಮವಾಗಿರಬೇಕು ಅನ್ನುವುದನ್ನು ಅಭಿಪ್ರಾಯಪಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರು ಆಗಿರುವ ಬಿ. ಪುಷ್ಪರಾಜ್, ಆಡಳಿತ ನಿರ್ದೇಶಕರಾದ ಬಿ. ಪಿ.ಸಂಪತ್ ಕುಮಾರ್, ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲರಾದ ಸುರೇಶ್, ಶೈಕ್ಷಣಿಕ ಸಂಯೋಜಕರಾದ ಶ್ರೀ ಪ್ರಸಾದ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುಕೆಜಿ ಪುಟಾಣಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಯುಕೆಜಿ ವಿದ್ಯಾರ್ಥಿನಿಯರಾದ ಶ್ರುತಿಕ ಕಾಮತ್ ಹಾಗೂ ಅಮೂಲ್ಯ ನೆರವೇರಿಸಿದರು. ಪುಟಾಣಿ ಅತುಲಿತ್ ಗ್ಯಾನ್ ಸ್ವಾಗತಿಸಿ, ಆರಲ್ ಲೋಬೊ ವಂದಿಸಿದರು. ಯುಕೆಜಿ ಪುಟಾಣಿ ರಕ್ಷಿತ್ ಕಾಮತ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ