ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನದ ಊಟವನ್ನು ಕ್ರಮವಾಗಿ 5 ಮತ್ತು 10 ರೂಪಾಯಿಗೆ ನೀಡಲಾಗುತ್ತಿದೆ. ಈಗ ಸಮ್ಮಿಶ್ರ ಸರ್ಕಾರದಲ್ಲಿ ಬೆಳಗ್ಗಿನ ತಿಂಡಿಯ ಜೊತೆಗೆ ಕಾಫಿ, ಟೀ ನೀಡಲು ನಿರ್ಧರಿಸಲಾಗಿದೆ. ನೂತನ ವ್ಯವಸ್ಥೆ ಜನವರಿಯಿಂದ ಜಾರಿಗೆ ಬರಲಿದೆ ಎಂದು ಸಚಿವ ಜಿ.ಪರಮೇಶ್ವರ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿಯಿಂದ ಇಂದಿರಾ ಕ್ಯಾಂಟೀನ್ ಗಳಲ್ಲಿ ಕಾಫಿ,ಟೀ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರಿಂದ ಬಂದ ಸಲಹೆಯಿಂದ ಬೆಳಗಿನ ವೇಳೆ 5 ರೂ ಗೆ ತಿಂಡಿ ಜತೆ ಟೀ, ಕಾಫಿ ನೀಡಲು ಮುಂದಾಗಿದೆ ಎಂದರು.