ಬೆಂಗಳೂರು: ‘ದಿ-ವಿಲನ್’ ಚಿತ್ರದಲ್ಲಿನ ದೃಶ್ಯ ವಿರೋಧಿಸಿ ನಿರ್ದೇಶಕ ಪ್ರೇಮ್ ಹಾಗೂ ಕಿಚ್ಚ ಸುದೀಪ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ.
ದಿ-ವಿಲನ್ ಸಿನಿಮಾದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಕಿಚ್ಚ ಸುದೀಪ್ ತಮ್ಮ ಸೊಂಟಕ್ಕೆ ಕನ್ನಡದ ಬಾವುಟ ಸುತ್ತಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ಅವರ ವಿರುದ್ಧ ದೂರು ದಾಖಲಾಗಿದೆ.
ಸದ್ಯ ಪ್ರೇಮ್ ಹಾಗು ಸುದೀಪ್ ಕ್ಷಮೆ ಕೇಳಬೇಕು, ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು ಸಂಘಟನೆ ತಿಳಿಸಿದೆ.