ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ವಿಚಾರ, ಸಚಿವರುಗಳ ಭೇಟಿಯಾದ ಶಾಸಕ ಅಶೋಕ್ ರೈ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಸರಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂದು ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರ ಜೊತೆ ಚರ್ಚೆ ನಡೆಸಿದ್ದಾರೆ.
ಪುತ್ತೂರಿಗೆ ಈ ಬಾರಿಯ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಮಂಜೂರುಗೊಂಡಿತ್ತು. ಇದಾದ ಬಳಿಕ ಬನ್ನೂರಿನಲ್ಲಿ ಕಾಯ್ದಿರಿಸಿದ ೪೦ ಎಕ್ರೆ ಜಾಗಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಉನ್ನತ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ಸರಕಾರಕ್ಕೆ ವರದಿಯನ್ನು ಸಲ್ಲಿಸಲಾಗಿದೆ. ಇದಾದ ಬಳಿಕ ಎ. ೩ ರಂದು ಶಾಸಕರು ಬೆಂಗಳೂರಿನಲ್ಲಿ ಸಚಿವರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
೩೦೦ ಕೋಟಿ ರೂ ಅನುದಾನ ಬಿಡುಗಡೆಗೆ ಮನವಿ
ವೈದ್ಯಕೀಯ ಸಚಿವ ಶರಣಪ್ರಕಾಶ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಗಿ ಮಾತುಕತೆ ನಡೆಸಿದ ಶಾಸಕರು ಮೆಡಿಕಲ್ ಕಾಲೇಜು ನಿರ್ಮಾಣ ವಿಚಾರಕ್ಕೆ ಸಂಬಂದಿಸಿದಂತೆ ಪ್ರಾರಂಭಿಕ ೩೦೦ ಕೋಟಿ ರೂ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಪ್ರಾರಂಭಿಕವಾಗಿ ೪೦೦ ಬೆಡ್‌ನ ಆಸ್ಪತ್ರೆಯ ನಿರ್ಮಾಣವಾಗಬೇಕಿದೆ. ಆಸ್ಪತ್ರೆ ನಿರ್ಮಾಣವಾದ ಬಳಿಕ ಮೆಡಿಕಲ್ ಕಾಲೇಜು ಪ್ರಕ್ರಿಯೆ ಆರಂಭವಾಗಲಿದ್ದು ಆಸ್ಪತ್ರೆ ನಿರ್ಮಾಣಕ್ಕೆ ೩೦೦ ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಭರವಸೆಯನ್ನು ನೀಡಲಾಗಿದೆ.
ಬಾಕ್ಸ್
ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮತ್ತು ಅದಕ್ಕೆ ಪೂರಕವಾಗಿ ಕೆಲವು ವಿಚಾರಗಳ ಬಗ್ಗೆ ಇಂದು ಇಬ್ಬರು ಸಚಿವರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿದೆ. ಮೊದಲಿಗೆ ೪೦೦ ಬೆಡ್‌ನ ಆಸ್ಪತ್ರೆ ನಿರ್ಮಾಣವಾಗಲಿದ್ದು ಇದಕ್ಕಾಗಿ ೩೦೦ ಕೋಟಿ ರೂ ಅನುದಾನಕ್ಕೆ ಮನವಿ ಮಾಡಿದ್ದು ಶೀಘ್ರ ಅನುದಾನವನ್ನು ಮಂಜೂರು ಮಾಡುವ ಬಗ್ಗೆ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲೇ ಅನುದಾನ ಮಂಜೂರಾಗುವ ವಿಶ್ವಾಸವಿದ್ದು,ಹಂತ ಹಂತವಾಗಿ ಮೆಡಿಕಲ್ ಕಾಲೇಜಿಗೆ ಸಂಬಂದಿಸಿದ ಎಲ್ಲಾ ವಿಚಾರಗಳು ಸರಕಾರಿ ಮಟ್ಟದಲ್ಲಿ ವೇಗತೆಯನ್ನು ಪಡೆದುಕೊಳ್ಳಲಿದೆ.