ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ. ಓರ್ವ ಮೃ*ತ್ಯು -ಕಹಳೆ ನ್ಯೂಸ್

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ಮುಂಜಾನೆ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಬಸ್ಸ್ ಅನ್ನು ಕ್ರೈನ್ ಬಳಸಿ ಮೇಲಕ್ಕೆತ್ತಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.