Tuesday, April 8, 2025
ಜಿಲ್ಲೆಬೆಳ್ತಂಗಡಿಸುದ್ದಿ

ತರಕಾರಿ ಸಾಗಾಟದ ವಾಹನದಲ್ಲಿ ಅಕ್ರಮ ಗೋ ಸಾಗಾಟ-ಕಹಳೆ ನ್ಯೂಸ್

ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋ ಸಾಗಾಟ ನಡೆಸಲು ಹೊರಟ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ಜಾನುವಾರು ಸಾಗಾಟದ ವಾಹನವನ್ನು ತಡೆಹಿಡಿಯಲಾಗಿದೆ.

ಹಿಂಸಾತ್ಮಕವಾಗಿ ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಹಸುಗಳನ್ನು ಗೋವಧೆಗೆಂದು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಸಂಘಟನೆ ಕಾರ್ಯಕರ್ತರು ವಾಹನವನ್ನು ಹಿಂಬಾಲಿಸಿ ತಡೆಹಿಡಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದು, ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದಂತೆ ಹಿಂಸಾತ್ಮಕವಾಗಿ ಸಾಗಾಟ ನಡೆಸುತ್ತಿದ್ದ ವಾಹನ ಹಾಗೂ 15 ಕ್ಕೂ ಅಧಿಕ ಗೋವುಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ ಯುವಕರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕಿನ‌ ಹಲವೆಡೆಯಿಂದ ಗೋವುಗಳನ್ನು ತುಂಬಿ ಮಂಗಳೂರಿಗೆ ಸಾಗಾಟ ನಡೆಸಲು ಉದ್ದೇಶಿಸಲಾಗಿತ್ತು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ, ಏಸ್ ವಾಹನದಲ್ಲಿ ಮೇಲ್ಭಾಗದಲ್ಲಿ ತರಕಾರಿ, ತಳಭಾಗದಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ