ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ
ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ‘ಎಲ್ಲೋ’ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎದ್ದಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲೆ ಉಂಟಾಗಲಿದೆ ಎಂದು ಅಂದಾಜಿಸಲಾಗಿದೆ.