ಇಂದು ರಾಜ್ಯಾದ್ಯಂತ 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಾ.1ರಿಂದ 20ರವರೆಗೆ ನಡೆದ 2025 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏ.8ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ.
ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ.
ಬಳಿಕ ಮಂಡಳಿ https://karresults.nic.in/ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 1.30 ಗಂಟೆಗೆ ಪ್ರಕಟಿಸಲಾಗುತ್ತದೆ. ನಂತರ ಎಲ್ಲ ಕಾಲೇಜುಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಮೊಬೈಲ್ ಸಂಖ್ಯೆಗೂ ಫಲಿತಾಂಶವನ್ನು ರವಾನಿಸಲಾಗುತ್ತದೆ.
ಮಾ.1ರಿಂದ 20ರವರೆಗೆ ನಡೆದಿದ್ದ ಪರೀಕ್ಷೆಗೆ 7.13 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಪರೀಕ್ಷೆ ಬರೆದಿದ್ದರು. ಇದೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆಯಲ್ಲಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮತ್ತು ಸುಸೂತ್ರವಾಗಿ ನಡೆಸಲಾಗಿತ್ತು.