Wednesday, April 23, 2025
ವಾಣಿಜ್ಯಸುದ್ದಿ

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ-ಕಹಳೆ ನ್ಯೂಸ್

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು ಕಡಿಮೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ. ಈ ಮೂಲಕ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8, 285 ಆಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 9,037 ಆಗಿದ್ದು, 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,778 ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಷೇರು ಮಾರುಕಟ್ಟೆ ಸೋಮವಾರದಂದು 3,000ಕ್ಕೂ ಅಧಿಕ ಅಂಕಗಳನ್ನು ಕಳೆದುಕೊಂಡಿದ್ದು, ಅದೇ ದಿನದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ತೀವ್ರ ಇಳಿಕೆ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹2,613 ಇಳಿಕೆಯಾಗಿದ್ದು, ಪ್ರಸ್ತುತ ಬೆಲೆ ₹88,401 .ಆಗಿದೆ. ಹಿಂದೆ ಇದೇ ಚಿನ್ನದ ಬೆಲೆ ₹91,014 .

ಒಂದು ಕೆಜಿ ಬೆಳ್ಳಿ ಬೆಲೆ ₹4,535 ಇಳಿಕೆಯಾಗಿದ್ದು, ಈಗ ಅದು ₹88,375 ಕ್ಕೆ ತಲುಪಿದೆ. ಹಿಂದಿನ ಬೆಲೆ 92,910 ಆಗಿತ್ತು. ಕೆಲವೇ ದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿಯ ಮೌಲ್ಯದಲ್ಲಿ ಸಾವಿರಾರು ರೂ ಇಳಿಕೆಯಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ