ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು -ಕಹಳೆ ನ್ಯೂಸ್

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ.
ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ನಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ನಿನ್ನೆ ಪ್ರಕಟಗೊಂಡ ಫಲಿತಾಂಶದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ, ಮನೆಯಲ್ಲಿ ಯಾರೊಬ್ಬರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.