ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ರವೀಶ್ ತಂತ್ರಿಯವರ ನೇತೃತ್ವದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ರವೀಶ್ ತಂತ್ರಿಯವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಇದೇ ವೇಳೆ ಹತ್ತೂರ ಒಡೆಯನಿಗೆ ಪ್ರಭಾವಳಿಯ ಚಿನ್ನದ ಪೀಠವನ್ನು ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ, ಶಾಸಕ ಅಶೋಕ್ ಕುಮಾರ್ ರೈ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.