Tuesday, April 22, 2025
ಬೆಂಗಳೂರುರಾಜ್ಯಶಿಕ್ಷಣಸುದ್ದಿ

2025-26ನೇ ಸಾಲಿನ ಕರ್ನಾಟಕ `ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಜೂನ್ 2ರಿಂದಲೇ ತರಗತಿಗಳು ಆರಂಭ.!-ಕಹಳೆ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಾಕಿ ಇರುವಾಗಲೇ ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ ಆರಂಭವಾಗಿ ಸೆ. 21ರವರೆಗೆ ಹಾಗೂ ಎರಡನೇ ಅವಧಿ ಅ.8 ರಿಂದ 2026ರ ಮಾರ್ಚ್ 31ರವರೆಗೆ ಇರಲಿದ್ದು, ಸೆ. 22ರಿಂದ ಅ. 7ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ