Thursday, April 17, 2025
ಕಾರ್ಕಳಜಿಲ್ಲೆಸುದ್ದಿ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ -ಕಹಳೆ ನ್ಯೂಸ್

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024- 25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯಮಟ್ಟದಲ್ಲಿ 10ರೊಳಗಿನ ರ‍್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ, 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 5ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ತಾನಿಗಳಾದ ಕಾರ್ಕಳ ಜ್ಞಾನಸುಧಾಧದ ಶ್ರೀ ರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಅಪೂರ್ವ್ ವಿ ಕುಮಾರ್ ಮತ್ತು ವಾಣಿಜ್ಯ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾದ ಕಾರ್ಕಳ ಜ್ಞಾನಸುಧಾದ ಕು.ಸಹನಾ ನಾಯಕ್ ಮತ್ತು ತನ್ವಿ ರಾವ್ ಇವರೊಂದಿಗೆ ಇತರ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾದ ಸಿ.ಇ.ಒ ದಿನೇಶ್ ಎಂ ಕೊಡವೂರ್, ಉಡುಪಿ ಜ್ಞಾನಸುಧಾದ ಪ್ರಾಂಶುಪಾಲರಾದ ಶ್ರೀ ಸಂತೋಷ್ ಹಾಗೂ ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಶ್ರೀ ಗಣೇಶ್ ಶೆಟ್ಟಿ, ಸಾಧಕ ವಿದ್ಯಾರ್ಥಿಗಳ ಹೆತ್ತವರು ಹಾಗೂ ಹಿತೈಷಿಗಳಾದ ತ್ರಿವಿಕ್ರಮ ಕಿಣಿ ಹಾಗೂ ದೇವೇಂದ್ರ ನಾಯಕ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಆಂಗ್ಲಭಾಷಾ ಮುಖ್ಯಸ್ಥೆ ಶ್ರೀಮತಿ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ