Saturday, November 23, 2024
ಸುದ್ದಿ

ರಾಜ್ಯಕ್ಕೆ ಕಾಲಿಡ್ತಿದೆ ಗಜ ಚಂಡಮಾರುತ ; ಕರಾವಳಿ ಭಾಗದಲ್ಲಿ 2 ದಿನ ಹೈ ಅಲರ್ಟ್..! – ಕಹಳೆ ನ್ಯೂಸ್

ಬೆಂಗಳೂರು: ಕಳೆದ ಕೆಲದಿನಗಳಿಂದ ತಮಿಳುನಾಡಿನಲ್ಲಿ ಅವಾಂತರ ಸೃಷ್ಟಿಸಿದ್ದ ಗಜ ಚಂಡಮಾರುತ ಇಂದು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಇದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಸಾಧ್ಯತೆ ಇದ್ದು, ಸಮುದ್ರ ತೀರದಲ್ಲಿ ರಕ್ಕಸಗಾತ್ರದ ಅಲೆಗಳು ಏಳುವ ಸಾಧ್ಯತೆಯಿಂದ ಮೀನುಗಾರರು ಸಮುದ್ರ ತೀರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಚಂಡಮಾರುತ ಮುಂಜಾಗೃತ ಕ್ರಮದ ಹಿನ್ನೆಲೆಯಲ್ಲಿ ರಕ್ಷಣಾ ಸಿದ್ಧತೆ ನಡೆಸಲು ಸೂಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗಜ ಚಂಡಮಾರುತ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಶುರುವಾಗಿದ್ದು, ಈಗಾಗಲೇ ವಾಯುಭಾರ ಕುಸಿತವಾಗಿದೆ. ಈ ಚಂಡಮಾರುತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 19 ರಿಂದ 21 ರವರಗೂ ಚಂಡಮಾರುತದ ಎಫೆಕ್ಟ್ ಜೋರಾಗಿರಲಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಸೇರಿದಂತೆ ದಕ್ಷಿಣ ಒಳಭಾಗ, ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಗಜ ಚಂಡಮಾರುತದ ಭೀಕರತೆಗೆ ತಮಿಳುನಾಡಿನಲ್ಲಿ ಇದುವರೆಗೂ 33 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಸದ್ಯ ಬಿರುಗಾಳಿ ಮಳೆ ನಿಂತಿದ್ದು, ಎಲ್ಲಿ ನೋಡಿದರು ಹಾನಿಗೊಳಗಾದ ಮನೆಗಳು, ಮರಗಳು, ಕರೆಂಟ್ ಕಂಬಗಳೇ ಕಾಣಸಿಗುತ್ತಿದೆ.