Friday, September 20, 2024
ಸುದ್ದಿ

ಎನ್ ಐಟಿಕೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ, ವಿದ್ಯಾರ್ಥಿಗಳಿಂದ ತೀವ್ರ ಸ್ವರೂಪದ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು, ನ 18 : ಎನ್ ಐಟಿಕೆ ಕಾಲೇಜು ವಿದ್ಯಾರ್ಥಿ ಆನಂದ್ ಪಾಠಕ್ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ತೀವ್ರ ಸ್ವರೂಪದ ಪ್ರತಿಭಟನೆ ನಡೆಯುತ್ತಿದೆ.

ಹಿನ್ನೆಲೆ : ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಸುರತ್ಕಲ್‍ನ ಎನ್‍ಐಟಿಕೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿವಾಸಿ, ಬಿಟೆಕ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ತೃತೀಯ ವರ್ಷದಲ್ಲಿದ್ದ ಆನಂದ್ ಪಾಠಕ್ (21) ಮೃತ ವಿದ್ಯಾರ್ಥಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ತರಗತಿಗೆ ಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ಸೋಮವಾರದ ಸೆಮಿಸ್ಟರ್ ಪರೀಕ್ಷೆಗೆ ಕಾಲೇಜಿನ ಉಪನ್ಯಾಸಕರು ಅವಕಾಶ ನಿರಾಕರಿಸಿದ್ದರು. ಅಲ್ಲದೇ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಮಧ್ಯಾಹ್ನ ವಿದ್ಯಾರ್ಥಿಯನ್ನು ಕರೆದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ ಆನಂದ್ ಪಾಠಕ್, ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ವಿದ್ಯಾರ್ಥಿಗಳಿಂದ ತೀವ್ರ ಸ್ವರೂಪದ ಪ್ರತಿಭಟನೆ :

ಘಟನೆ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ರಾತ್ರಿ ವರೆಗೂ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿತ ಉಪನ್ಯಾಸಕರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಲೇಜು ಕ್ಯಾಂಪಸ್ ನಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಲೇಜಿನ ಆಡಳಿತ ವರ್ಗ ವಿಚಾರ ಹೊರಬರದಂತೆ ಮುಚ್ಚಿ ಹಾಕಿದೆಯೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಯನ್ನು ಅವಮಾನಿಸಿದ ಮೆಕಾನಿಕಲ್ ವಿಭಾಗದ ಪ್ರೊ. ಹರ್ಬರ್ಟ್ ಅವರನ್ನು ಅಮಾನತ್ತುಗೊಳಿಸಬೇಕೆಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಅಲ್ಲದೆ ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.