ಪುಳಿಂಚ ಪ್ರಶಸ್ತಿಗೆ ಯಕ್ಷ ಕಲಾವಿದ ಬೋಳಾರ, ಗೋಣಿಬೀಡು, ಮಿಜಾರು ಆಯ್ಕೆ -ಕಹಳೆ ನ್ಯೂಸ್

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ದಿ| ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ ನೀಡಲಾಗುವ “ಪುಳಿಂಚ ಪ್ರಶಸ್ತಿ’ಗೆ ಮೂವರು ಪ್ರಸಿದ್ಧ ಯಕ್ಷಗಾನ ಕಲಾವಿದರು ಆಯ್ಕೆಯಾಗಿದ್ದಾರೆ.
ತೆಂಕುತಿಟ್ಟಿನ ಹಿರಿಯ ಕಲಾವಿದ ಬೋಳಾರ ಸುಬ್ಬಯ್ಯ ಶೆಟ್ಟಿ, ಗೋಣಿಬೀಡು ಸಂಜಯಕುಮಾರ್ ಶೆಟ್ಟಿ ಮತ್ತು ಮಿಜಾರು ತಿಮ್ಮಪ್ಪ ಅವರನ್ನು 2023-25ನೇ ಸಾಲಿನ ಪುಳಿಂಚ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ದಿ| ಬಂಟ್ವಾಳ ಜಯರಾಮ ಆಚಾರ್ಯರಿಗೆ ಮರಣೋತ್ತರ ಪ್ರಶಸ್ತಿಯನ್ನು ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಪುಳಿಂಚ ಸೇವಾ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ, ನ್ಯಾಯವಾದಿ ಪುಳಿಂಚ ಶ್ರೀಧರ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮೇ 4ರಂದು ಪ್ರಶಸ್ತಿ ಪ್ರದಾನ
ಪುಳಿಂಚ ಪ್ರಶಸ್ತಿ ಹಾಗೂ ಮರಣೋತ್ತರ ಪ್ರಶಸ್ತಿಗಳು ತಲಾ 25,000 ರೂ. ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಮೇ 4ರಂದು ಬಂಟ್ವಾಳದ ಬಾಳ್ತಿಲ ಗ್ರಾಮದ ಚೆಂಡೆ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.