Wednesday, April 23, 2025
ಬೆಂಗಳೂರುಸಂತಾಪಸಿನಿಮಾಸುದ್ದಿ

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.

ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದ ಜನಾರ್ಧನ್ ಅವರು ತಡರಾತ್ರಿ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಜನಾರ್ಧನ್ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3-4 ಗಂಟೆ ವೇಳೆಗೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್ ಅವರು 800ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ